ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ.
ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಕೆಜಿಎಫ್ ಚಾಪ್ಟರ್-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸ್ಟುಡಿಯೋ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಆದೇಶಿಸಿದೆ.
ಮೂಲಹಾಡನ್ನು ಸಿಂಕ್ರೊನೈಸ್ ಮಾಡಿದ ಆವೃತ್ತಿಯೊಂದಿಗೆ ಸೇರಿಸಲಾಗಿದೆ. ಈ ಕೃತ್ಯಕ್ಕೆ ಪ್ರೋತ್ಸಾಹ ನೀಡಿದರೆ ಛಾಯಾಗ್ರಹಣ ಚಲನಚಿತ್ರಗಳು, ಹಾಡುಗಳು, ಸಂಗೀತ ಆಲ್ಬಮ್‌ಗಳನ್ನು ಸ್ವಾಧೀನಪಡಿಸಿಕೊಳ್ಳುವ ವ್ಯವಹಾರದಲ್ಲಿ ತೊಡಗಿರುವ ಉದ್ಯಮಗಳಿಗೆ ಸಮಸ್ಯೆಯಾಗಬಹುದು. ಅಲ್ಲದೇ ಇದು ಪೈರಸಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.