Wednesday, January 22, 2025

ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಬಿ.ಎಸ್ ಯಡಿಯೂರಪ್ಪ

ಉಡುಪಿ:ಚುನಾವಣೆಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯ, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಬಿ.ಎಸ್ ಯಡಿಯೂರಪ್ಪ.

ಸಿದ್ದರಾಮಯ್ಯ ಯಾವುದೊ ಭ್ರಮೆಯಲ್ಲಿದ್ದಾರೆ, ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ.ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ.
ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ.

ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರ್ತೀವಿ ಅಂತೀರಿ ಆದರೆ ನೀವು ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ. ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ.ಎಂಎಲ್ಎ ಆಗಿ ಕೆಲವೇ ಮತಗಳಿಂದ ಅಂದು ಗೆದ್ದಿದ್ದೀರಿ. ಆನಂತರ ಕ್ಷೇತ್ರವನ್ನು ಮರೆತುಬಿಟ್ಟಿದ್ದೀರಿ ಅಭಿವೃದ್ಧಿ ಮಾಡಿಲ್ಲ. ಬಾದಾಮಿಯನ್ನು ತೊರೆಯುತ್ತೀರಿ ಎಂಬುದು ನಿಮಗೆ ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ. ರಾಜ್ಯದ ಜನ ಈಗಾಗಲೇ ತೀರ್ಮಾನವನ್ನು ಮಾಡಿದ್ದಾರೆ ನಿಮಗೆ ಉತ್ತರ ಕೊಡುತ್ತಾರೆ. ಬೇರೆಬೇರೆ ಪಕ್ಷದಿಂದ ಅನೇಕರು ಈಗಾಗಲೇ ಬಿಜೆಪಿ ಬಂದಿದ್ದಾರೆ ಇನ್ನೂ ಬರುವವರಿದ್ದಾರೆ
ಉಡುಪಿಯಲ್ಲಿ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES