Monday, December 23, 2024

ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇನ್ನೆರಡು ದಿನ ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES