ಕಾರವಾರ : ಕರಾವಳಿ ಭಾಗದಲ್ಲಿ ಹೆಚ್ಚಿನ ಜನ್ರು ಮೀನುಗಾರಿಕೆಯನ್ನ ನಂಬಿಕೊಂಡೆ ಜೀವನ ಸಾಗಿಸ್ತಿದ್ದಾರೆ. ಅದರಲ್ಲೂ ಸಾಂಪ್ರದಾಯಿಕ ನಾಡ ದೋಣಿಗಳನ್ನ ಬಳಸಿ ನಿತ್ಯ ಮೀನುಗಾರಿಕೆ ಮಾಡಿ, ಬರುವ ಹಣದಲ್ಲಿ ತಮ್ಮ ಜೀವನ ಸಾಗಿಸುವವರೆ ಹೆಚ್ಚು. ಆದ್ರೆ, ಕಳೆದ ಮೂರು ತಿಂಗಳಿನಿಂದ ಸರ್ಕಾರದಿಂದ ನಾಡ ದೋಣಿ ನಡಿಸಲು ಸೀಮೆಎಣ್ಣೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಸಾಂಪ್ರದಾಯಿಕ ಮೀನುಗಾರರು ತಮ್ಮ ಹೊಟ್ಟೆಗೆ ತಣ್ಣೀರಿನ ಬಟ್ಟೆ ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ.
ಇನ್ನು ಸೀಮೆಎಣ್ಣೆ ಪೂರೈಕೆ ಮಾಡಿ ಅಂತಾ ಸರ್ಕಾರಕ್ಕೆ ಮನವಿ ಮಾಡಿದ್ರೂ, ಯಾರು ಕೂಡ ಸ್ಪಂದಿಸುತ್ತಿಲ್ಲ. ಹೀಗಾಗಿ ಕೆರಳಿದ್ದಾರೆ. ಈ ಸರ್ಕಾರದಿಂದ ಮೀನುಗಾರರಿಗೆ ಸೀಮೆಎಣ್ಣೆ ಪೂರೈಕೆ ಮಾಡಲು ಸಾಧ್ಯವಾಗದೆ ಇದ್ದರೆ ತೊಟ್ಟು ವಿಷವನ್ನ ಕೊಟ್ಟು ಬಿಡಿ ಅಂತಿದ್ದಾರೆ ಮೀನುಗಾರರು. ಶೀಘ್ರವೇ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದಬೇಕು. ಇಲ್ಲವಾದಲ್ಲಿ ನಾವು ಬೀದಿಗಿಳಿದು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ.