Wednesday, January 22, 2025

ಜಾಮೀನು ಅರ್ಜಿ ವಿಚಾರಣೆ; ನ್ಯಾಯಾಲಯಕ್ಕೆ ಜಾಕ್ವೆಲಿನ್ ಫರ್ನಾಂಡೀಸ್ ಹಾಜರು

ನವದೆಹಲಿ: ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ದೆಹಲಿಯ ಪಟಿಯಾಲ ಕೋರ್ಟ್‌ಗೆ ಆಗಮಿಸಿದ್ದಾರೆ.

ಇಂದು ನಟಿ ಜಾಕ್ವೆಲಿನ್ ಫರ್ನಾಂಡೀಸ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನ ದೆಹಲಿಯ ಪಟಿಯಾಲ ನ್ಯಾಯಾಲಯ ಆಲಿಸಲಿದೆ.

ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ವಂಚನೆ ಕೇಸ್​ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಬಂಧನ ಭೀತಿಯಲ್ಲಿ ಇರುವ ಅವರು ಸದ್ಯಕ್ಕೆ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವನ್ನು ಸುಕೇಶ್​ ಚಂದ್ರಶೇಖರ್ ಎದುರಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES