ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ, ಕೇಂದ್ರ ಸರ್ಕಾರದ ಉಡಾನ್ ಯೋಜನೆ ನಿರೀಕ್ಷಿತ ಗುರಿ ಸಾಧಿಸಿಲ್ಲ. ಇದ್ರಿಂದ ಕರ್ನಾಟಕದ ಜನಸಾಮಾನ್ಯರ ಕನಸು ಭಗ್ನವಾಗಿದೆ.
ಉಡಾನ್ ಯೋಜನೆ ಸಬ್ಸಿಡಿ ಗಡುವು ಮುಗಿಯುತ್ತಿದ್ದಂತೆ ಖಾಸಗಿ ವಿಮಾನಯಾನ ಸಂಸ್ಥೆಗಳು ಯೋಜನೆಯಿಂದ ಹಿಂದೆ ಸರಿಯುತ್ತಿದೆ. ಹೀಗಾಗಿ ಹುಬ್ಬಳ್ಳಿ, ಕಲಬುರಗಿ ಸೇರಿ ಹಲವು ಜಿಲ್ಲೆಗಳಿಗೆ ವಿಮಾನಗಳ ಸಂಖ್ಯೆ ಕಡಿತವಾಗಿದೆ.
ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಮಹತ್ತರ ಸುಧಾರಣೆ ತರುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಉಡಾನ್ ಯೋಜನೆ ಜಾರಿಗೆ ತಂದಿದೆ. ಹವಾಯಿ ಚಪ್ಪಲಿ ಹಾಕುವವರೂ ವಿಮಾನ ಯಾನ ಮಾಡಬೇಕು ಎಂದು ಮೋದಿ ಹೇಳಿದ್ದರು.
ಈ ವಿಮಾನವನ್ನು ಪ್ರಯಾಣಿಕರಿಗೆ ವಿಮಾನ ಪ್ರಯಾಣ ಉತ್ತೇಜಿಸಲು ವಿನ್ಯಾಸಗೊಳಿಸಲಾಗಿತ್ತು. ಸಣ್ಣ ನಗರಗಳಿಗೂ ಭೇಟಿ ನೀಡುವ ಪ್ರಯಾಣಿಕರ ಅನುಕೂಲಕ್ಕಾಗಿ ಇದನ್ನು ನಿರ್ಮಾಣ ಮಾಡಲಾಗಿತ್ತು.