Saturday, January 18, 2025

ಗುಜರಾತ್​ ಚುನಾವಣೆ ಮೊದಲ ಪಟ್ಟಿ ಬಿಡುಗಡೆ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್​​​​

ನವದೆಹಲಿ: ಗುಜರಾತ್​ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನ ರಾಷ್ಟ್ರೀಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಡುಗಡೆ ಮಾಡಿದೆ.

ಗುಜರಾತ್​ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ 100 ಹೆಸರುಗಳನ್ನೊಳಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಪ್ರಕಟಿಸಿದ್ದಾರೆ.

ಗುಜರಾತ್​ ಸಿಎಂ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಅದರಂತೆ ಭಾರತ ಕ್ರಿಕೆಟ್​ ತಂಡದ ಆಲ್ರೌಂಡರ್​ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಬಿಜೆಪಿಯಿಂದ ಜಾಮ್‌ನಗರ ಉತ್ತರದಿಂದ ಸ್ಪರ್ಧಿಸಲಿದ್ದಾರೆ ಎಂದು ಯಾದವ್ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದ್ರಸಿನ್ಹ್ ಚುಡಾಸಮಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.

RELATED ARTICLES

Related Articles

TRENDING ARTICLES