Saturday, May 18, 2024

ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೋತ್ತರ ಸಮೀಕ್ಷೆಗೆ ತಡೆ

ನವದೆಹಲಿ: ಹಿಮಾಚಲ ಪ್ರದೇಶ ಮತ್ತು ಗುಜರಾತ್​ ರಾಜ್ಯಗಳು ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿವೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್​ 12ರಂದು ಮತ್ತು ಗುಜರಾತ್​​ನಲ್ಲಿ ಡಿಸೆಂಬರ್​ 1 ಮತ್ತು 5ರಂದು ವಿಧಾನಸಭೆ ಚುನಾವಣೆ ನಡೆಯಲಿದೆ.

ಈ ಎರಡೂ ರಾಜ್ಯಗಳ ಮತ ಎಣಿಕೆ ಡಿಸೆಂಬರ್​ 8ರಂದು ನಡೆಯಲಿದೆ. ಈ ಮಧ್ಯೆ ಚುನಾವಣಾ ಆಯೋಗ ಒಂದು ಮಹತ್ವದ ಆದೇಶ ಹೊರಡಿಸಿದೆ. ಈ ಎರಡೂ ರಾಜ್ಯಗಳಲ್ಲಿ ಚುನಾವಣೋತ್ತರ ಸಮೀಕ್ಷೆಯನ್ನು ಡಿಸೆಂಬರ್​ 5ರವರೆಗೆ ನಿಷೇಧಿಸಿದೆ.

ಗುರುವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಚುನಾವಣಾ ಆಯೋಗ, ನವೆಂಬರ್​​​ 12ರಿಂದ ಡಿಸೆಂಬರ್​​​ 5ರವರೆಗೆ ಹಿಮಾಚಲ ಪ್ರದೇಶ ಮತ್ತು ಗುಜರಾತ್​ ರಾಜ್ಯಗಳಲ್ಲಿ ಚುನಾವಣೋತ್ತರ ಸಮೀಕ್ಷೆ ನಡೆಸುವುದನ್ನು, ಯಾವುದೇ ರೀತಿಯ ಮತಗಟ್ಟೆ ಸಮೀಕ್ಷೆ ವರದಿಗಳನ್ನು ಪ್ರಕಟಿಸುವುದನ್ನು ನಿಷೇಧಿಸಲಾಗಿದೆ ಎಂದು ಉಲ್ಲೇಖಿಸಿದೆ.

RELATED ARTICLES

Related Articles

TRENDING ARTICLES