Monday, December 23, 2024

ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಕರೆಯದಿದ್ದಕ್ಕೆ ಜೆಡಿಎಸ್​ ಕೆಂಡ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರಿಗೆ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ನೀಡದೆ ಕನ್ನಡಿಗರಿಗೆ ದ್ರೋಹ ಮಾಡಿದೆ ಎಂದು ರಾಜ್ಯ ಬಿಜೆಪಿ ವಿರುದ್ಧ ಜೆಡಿಎಸ್​ ಕೆಂಡಕಾರಿದೆ. 

ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರವಿರುವ ಕಂಚಿನ ಪ್ರತಿಮೆಯನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅನಾವಣರಗೊಳಿಸಿದರು. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಆಹ್ವಾನ ಮಾಡದೇ ಇರೋದಕ್ಕೆ ಜೆಡಿಎಸ್​ ಪಕ್ಷ ಇಂದು ಸರಣಿ ಟ್ವೀಟ್​ ಮಾಡಿದೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ ಏಕೆ ಎಂದು ಅಂದಿನ ಸಿಎಂ ಬಿಎಸ್​ ಯಡಿಯೂರಪ್ಪ ಜತೆಗಿನ ಫೋಟೋ ಸಮೇತವಾಗಿ ಫೋಸ್ಟ್​ ಮಾಡಿ ಕಿಡಿಕಾರಿದೆ.

RELATED ARTICLES

Related Articles

TRENDING ARTICLES