Monday, December 23, 2024

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್​​​’ಗೆ ಯುವಕ ಬಲಿ

ಬೆಂಗಳೂರು; ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನ ಕಲ್ಯಾಣನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಬಾಪಿ ಕಮರಾ ಸಾವನ್ನಪ್ಪಿದ ಯುವಕ, ಅತಿವೇಗದಲ್ಲಿ ಚಲಿಸುತ್ತಿದ್ದ ಕ್ಯಾಂಟರ್, ನಿನ್ನೆ ರಾತ್ರಿ 11 ಗಂಟೆಗೆ ಕ್ಯಾಂಟರ್ ನಿಂದ ಹಿಟ್ ಅಂಡ್ ರನ್ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಾವೀಗಿಡಾದ ಯುವಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ 11 ಗಂಟೆಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಆದ್ರೆ ಯಾವ ವಾಹನ ಡಿಕ್ಕಿ ಹೊಡೆದಿದೆ ಅನ್ನೋದು ಈ ಅಪಘಾತದ ಸಂಪೂರ್ಣ ಮಾಹಿತಿ ಗೊತ್ತಿಲ್ಲ. ಅಪಘಾತ ಆದ ಬಳಿಕ ಮತ್ತೊಂದು ವಾಹನ ಕಮರಾನ ಮೇಲೆ ಹರಿದಿದೆ. ಈ ದೃಶ್ಯ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ರಸ್ತೆಯುದ್ದಕ್ಕೂ ಇರೋ ಸಿಸಿ ಕ್ಯಾಮರಾಗಳನ್ನ ಬಾಣಸವಾಡಿ ಸಂಚಾರಿ ಪೊಲೀಸರಿದ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES