Wednesday, January 22, 2025

ಬಿಜೆಪಿ ಟ್ವೀಟಿಗೆ ಪ್ರತಿ ಟ್ವೀಟ್‌ ಮಾಡಿದ ಜೆಡಿಎಸ್..!

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಕಡೆಗಣಿಸಿದ ಸರಕಾರ.  ಬಿಜೆಪಿ ಸರಕಾರದ ವಿರುದ್ಧ ಜೆಡಿಎಸ್‌ ಟ್ವೀಟ್‌ ದಾಳಿ ನಡೆಸಿದೆ.

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದು ಕಮಲ ಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡರ ಹೆಸರಿಲ್ಲ. ರಾಜ್ಯ ಸರಕಾರ ಜನರ ದಿಕ್ಕು ತಪ್ಪಿಸುತ್ತಿದೆ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.

ಬಿಜೆಪಿ ಟ್ವೀಟಿಗೆ ಪ್ರತಿ ಟ್ವೀಟ್‌ ಮಾಡಿದ ಜೆಡಿಎಸ್, ನವೆಂಬರ್‌ 11ರ ಕಾರ್ಯಕ್ರಮಕ್ಕೆ ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘ ಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? ಎನ್ನುವ ಮೂಲಕ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

RELATED ARTICLES

Related Articles

TRENDING ARTICLES