ಚಿಕ್ಕಬಳ್ಳಾಪುರ: 2023ರ ಚುನಾವಣೆ ಹತ್ತಿರವಾಗುತಿದ್ದಂತೆ ಪ್ರತಿಪಕ್ಷಗಳ ವಿರುದ್ಧ ಆರೋಪ ಪ್ರತ್ಯಾರೋಪ ಕೇಳಿಬರುತ್ತಿದೆ. ಇನ್ನು ಸುಧಾಕರ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಸಿದ್ದರಾಮಯ್ಯ ತಂತ್ರ ನಡೆಸುತ್ತಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಚಿಕ್ಕಬಳ್ಳಾಪುರ ಪಕ್ಷದ ನಾಯಕರ ಜೊತೆ ಸಭೆ ನಡೆಸಲಿರುವ ಸಿದ್ದು, ಸುಧಾಕರ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸೋದಾಗಿ ಹೇಳಿದ್ದ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ ಎಮದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ. ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲಿರುವ ಚಿಕ್ಕಬಳ್ಳಾಪುರದ ಕೈ ಮುಖಂಡರ ಜೊತೆ ಮಾಜಿ ಮುಕ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಕೆ. ಸುಧಾಕರ್ ವಿರುದ್ಧ ಕಣಕ್ಕಿಳಿಯುತ್ತಾರಾ ರಕ್ಷಾ ರಾಮಯ್ಯ ಎಂಬ ಕೂಗು ಕೂಡ ಕೇಳಿಬರುತ್ತಿದೆ. ಪ್ರಬಲ ಅಭ್ಯರ್ಥಿ ಆಯ್ಕೆ ಬಗ್ಗೆ ಸಿದ್ದರಾಮಯ್ಯ ಗಂಭೀರ ಚಿಂತನೆ ನಡೆಸಲಾಗುತ್ತಿದೆ. ರಕ್ಷಾ ರಾಮಯ್ಯ ಪರ ಹೆಚ್ಚು ಒಲವು ಹೊಂದಿರೋ ಕೈ ಕಾರ್ಯಕರ್ತರು.35 ಸಾವಿರ ಬಲಿಜ ಸಮುದಾಯದ ಮತಗಳಿರೋ ಚಿಕ್ಕಬಳ್ಳಾಪುರ,ಸಿದ್ದರಾಮಯ್ಯ ಭೇಟಿಗೆ ಆಗಮಿಸಿರೋ ಚಿಕ್ಕಬಳ್ಳಾಪುರ ಕೈ ಮುಖಂಡರು.