Wednesday, January 22, 2025

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್

ಮಂಗಳೂರು: ತಮಿಳು ನಟ ವಿಶಾಲ್ ಇತ್ತೀಚಿಗೆ ರಾಜ್ಯಕ್ಕೆ ಆಗಮಿಸಿ ಮಂಗಳೂರಿನಲ್ಲಿ ಬರುವ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದೆ ಪುನೀತ್​ ರಾಜ್​ಕುಮಾರ್ ಕನಸಿನ ಮೈಸೂರಿನ ಹೆಣ್ಣು ಮಕ್ಕಳ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳ ಜತೆಗೆ ಫೋಟೋ ಹಾಗೂ ಅಲ್ಲಿನ ತೊಂದರೆಗಳನ್ನ ಆಲಿಸಿದ್ದರು.

ತಮಿಳಿನಲ್ಲಿ ಯಶಸ್ವಿ ನಟರೆಂದೆ ಹೆಸರುವಾಸಿಯಾದ ನಟ ವಿಶಾಲ್​, ಸಾಕಷ್ಟು ಸಿನಿಮಾಗಳ ಮೂಲಕ ತಮ್ಮದೇಯಾದ ಫ್ಯಾನ್ಸ್​ ಹೊಂದಿದ್ದಾರೆ. ನಿನ್ನೆ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಅಲ್ಲದೇ, ಕುಕ್ಕೆ ಸುಬ್ರಹಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ನೆಚ್ಚಿನ ನಟನನ್ನು ನೋಡಿ ಫ್ಯಾನ್ಸ್ ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

RELATED ARTICLES

Related Articles

TRENDING ARTICLES