Sunday, December 22, 2024

ಸಿಎಂ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್

ಬೆಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಟ್ವಿಟ್ ಮಾಡಿದ ಸಿಎಂ ಬೊಮ್ಮಾಯಿ, ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಅಂತಾ ಸಿದ್ದರಾಮಯ್ಯ ಹೇಳಿಕೊಳ್ತಾರೆ. ಏರ್ಪೋಟ್’ಗೆ ಕೆಂಪೇಗೌಡರ ಹೆಸರಿಡುವ ತೀರ್ಮಾನ ಮಾಡಿದ್ದು ಬಿಜೆಪಿ ಸರ್ಕಾರ. ಫೆಬ್ರವರಿ 27, 2009 ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು‌ ಅಂದಿನ ಸಿಎಂ ಬಿಎಸ್ ವೈ ನೇತೃತ್ವದ‌ ಬಿಜೆಪಿ ಸರ್ಕಾರ ಆಗಿದೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಮಳೆಗಾಲದಲ್ಲಿ ಮಾತ್ರ ಮಿನುಗುವ ಮಿಂಚುಳ್ಳಿ ಹುಳಕ್ಕೆ. ಜಗತ್ತಿಗೆಲ್ಲಾ ಬೆಳಕು ನೀಡೋದು ನಾನೇ ಎನ್ನುವ ಭ್ರಮೆಯಂತೆ ಸಿದ್ದರಾಮಯ್ಯರದು ಕೂಡ ಅದೇ ರೀತಿಯ ಭ್ರಮೆ. ಯಾರೊ ಬೆಳಕು ನೀಡಿದರೆ, ರಾಜ್ಯ ನನ್ನಿಂದಲೇ ಬೆಳಗುತ್ತಿದೆ ಎಂದು ಹೇಳಿಕೊಳ್ಳುವ ಚಪಲತೆ ಅವರಿಗೆ ಎಂದು ಸಿದ್ದರಾಮಯ್ಯ ಹೇಳಿಕೆ ನೋಡಿದರೆ, ಮಳೆಗಾಲದ ಮಿಂಚುಳ್ಳಿ ನೆನಪಾಗುತ್ತದೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ನಿಜವಾದ ಅನುಯಾಯಿಗಳೇ? ಗೌರವಾರ್ಥವಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದೇವೆ. ಬೆಂಗಳೂರಿನ ಮುಖ್ಯ ಮೆಟ್ರೋ ನಿಲ್ದಾಣಕ್ಕೂ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಎಂದು ನಾಮಕರಣವನ್ನ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು. 

RELATED ARTICLES

Related Articles

TRENDING ARTICLES