Friday, November 22, 2024

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಇನ್ನೊಂದೆಡೆ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯೂ ಹೆಚ್ಚಾಗಿದೆ.

ಚಳಿಯಿಂದಾಗಿ ಬೆಂಗಳೂರು ಹಿಲ್​ ಸ್ಟೇಷನ್​ನಂತಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 15ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

RELATED ARTICLES

Related Articles

TRENDING ARTICLES