ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ ಸಾಧ್ಯತೆಯಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ..
ಕರ್ನಾಟಕದಲ್ಲಿ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ ಸಾಧಾರಣ ಮಳೆ ಸಾಧ್ಯತೆಯಿದ್ದು, ಇಂದಿನಿಂದ ಮೂರು ದಿನ ಅಂದ್ರೆ 13, 14, 15ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ.
ಇತ್ತ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ. ಇನ್ನು ಇಂದು ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಎರಡು, ಮೂರು ದಿನ ಸಾಧಾರಣ ಮಳೆಯಾಗಲಿದ್ದು, ಬೆಳಗ್ಗೆ ದಟ್ಟ ಮಂಜು ಕವಿದ ವಾತಾವಾರಣದಿಂದ ಕೂಡಿರಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.