Wednesday, January 22, 2025

ಪಂಚರತ್ನ ಯಾತ್ರೆ: ತಾಯಿ ಚಾಮುಂಡೇಶ್ವರಿ ಆಶಿರ್ವಾದ ಪಡೆದ ಕುಮಾರಸ್ವಾಮಿ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನವನ್ನ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಇಂದು ಪಡೆದರು.

ಇಂದಿನಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಚಾಲನೆ ಹಿನ್ನಲೆಯಲ್ಲಿ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ದೇವಿಗೆ ಭೇಟಿ ನೀಡಿ ಹೆಚ್​ಡಿಕೆ ವಿಶೇಷ ಪೂಜೆ ಸಲ್ಲಿಸಿದರು.

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಿರುಪತಿ ಬೈಪಾಸ್‌ ರಸ್ತೆಯ ಬಾಲಾಜಿ ಭವನದ ಪಕ್ಕದಲ್ಲಿ 12.30ರಿಂದ ಜೆಡಿಎಸ್​ನ ಪಂಚರತ್ನ ಯಾತ್ರೆ ಆರಂಭವಾಗಲಿದೆ. ಯಾತ್ರೆಗೂ ಮುನ್ನ ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿಯ ಆಶಿರ್ವಾದವನ್ನ ಮಾಜಿ ಸಿಎಂ ಹೆಚ್​ಡಿಕೆ ಪಡೆದರು. ಈ ವೇಳೆ ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆಂಪುರ್, ಸಿ‌ಎಸ್ ಪುಟ್ಟರಾಜು ಜಿಟಿ.ದೇವೇಗೌಡ, ಅಶ್ವಿನ್ ಕುಮಾರ್ ಸಾಥ್​ ನೀಡಿದರು.

ನೇರವಾಗಿ ಚಾಮುಂಡೇಶ್ವರಿ ಬೆಟ್ಟದಿಂದ ಪಂಚರತ್ನ ನಡೆಯಲಿರುವ ಸ್ಥಳಕ್ಕೆ ಹೆಚ್​ಡಿಕೆ ಹಾಜರಾಗಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪಂಚರತ್ನ ಯಾತ್ರೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿ ಪಕ್ಷದ ನಾಯಕರೆಲ್ಲಾ ಭಾಗಿಯಾಗಲಿದ್ದಾರೆ. ಈ ವೇಳೆ ಮುಂದಿನ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಜೆಡಿಎಸ್​ನ 90 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES