Thursday, December 19, 2024

ಮುಂಬೈನಲ್ಲಿ ಭೀಕರ ಅಪಘಾತ: ಐವರು ಸಾವು

ಮಹಾರಾಷ್ಟ್ರ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರನ್ನು ನವ ಮುಂಬೈನ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ.

ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ಮತ್ತು ಸುರಕ್ಷಿತವಾಗಿ ಚಾಲನೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ಡಿಸೆಂಬರ್ 1ರಂದು 24 ಗಂಟೆಗಳ ಕಾರು ತಪಾಸಣೆ ಡ್ರೈವ್ ಅನ್ನು ಪ್ರಾರಂಭಿಸುವುದಾಗಿ ಪ್ರಾದೇಶಿಕ ಸಾರಿಗೆ ಕಚೇರಿ ತಿಳಿಸಿತ್ತು. ಕಳೆದ 10 ತಿಂಗಳಲ್ಲಿ ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಮೀರಿದ ಸುಮಾರು 7,000 ಕಾರುಗಳಿಗೆ ದಂಡ ವಿಧಿಸಲಾಗಿತ್ತು.

RELATED ARTICLES

Related Articles

TRENDING ARTICLES