Wednesday, January 22, 2025

ಇಂದಿನಿಂದ ಭಾರತ vs ನ್ಯೂಜಿಲೆಂಡ್ ಟಿ-20 ಸರಣಿ ಆರಂಭ.!

ನ್ಯೂಜಿಲೆಂಡ್​: ನ್ಯೂಜಿಲೆಂಡ್​ ಹಾಗೂ ಭಾರತದ ನಡುವೆ ಇಂದಿನಿಂದ ಟಿ-20 ಆರಂಭಗೊಳ್ಳುವ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಸಜ್ಜಾಗಿದೆ.

ನ್ಯೂಜಿಲೆಂಡ್​ ವೆಲ್ಲಿಂಗ್ಟನ್ ಮೈದಾನದಲ್ಲಿ ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು, ರೋಹಿತ್​ಗೆ ಈ ಸರಣಿಯಲ್ಲಿ ವಿಶ್ರಾಂತಿ ನೀಡಿಲಾಗಿದ್ದು, ಹಾರ್ದಿಕ್​ ಪಾಂಡ್ಯ ಅವರನ್ನ ನಾಯಕನಾಗಿ ಬಿಸಿಸಿಐ ಮಾಡಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್​ ವಿರುದ್ಧ ಪರಾಭವಗೊಂಡಿತು.

ನ್ಯೂಜಿಲೆಂಡ್​ ಪ್ರವಾಸಕ್ಕೆ ಆಯ್ಕೆಯಾದ ಭಾರತ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ವಿಕೆಟ್​ ಕೀಪರ್​​), ಶುಭಮನ್ ಗಿಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಕುಲ್ದೀಪ್ ಯಾದವ್ , ಹರ್ಷಲ್ ಪಟೇಲ್

ನ್ಯೂಜಿಲೆಂಡ್ ತಂಡ

ಡೆವೊನ್ ಕಾನ್ವೇ (ವಿ.ಕಿಪರ್​​), ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ

RELATED ARTICLES

Related Articles

TRENDING ARTICLES