Home ರಾಜ್ಯ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಸಿಎಂ

ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಸಿಎಂ

0
ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ‌ ಆರೋಗ್ಯ ವಿಚಾರಿಸಿದರು.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಪ್ರವಾಸ ಮಧ್ಯೆ ಸಿಎಂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿ ಶೀಘ್ರ ಚೇತರಿಕೆಗೆ ಹೌರೈಸಿದರು. ಈ ವೇಳೆ ಸಚಿವರಾದ ಡಾ.ಅಶ್ವಥ್ ನಾರಾಯಣ್, ಎಸ್.ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ ಮುಂತಾದವರು ಜತೆಗಿದ್ದರು.

ತನ್ನ ಅನಾರೋಗ್ಯದ ವಿಚಾರವನ್ನು ಸ್ವತ ಟ್ವಿಟರ್ ನಲ್ಲಿ ಈ ಹಿಂದೆ ಹಂಚಿಕೊಂಡಿದ್ದ ನಳಿನ್ ಕುಮಾರ್​ ಕಟೀಲ್​, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ಹೇಳಿದ್ದರು.