Monday, December 23, 2024

ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ : ಡಿ.ಕೆ ಶಿವಕುಮಾರ್

ಬೆಂಗಳೂರು : ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕಿ ಸಿದ್ದರಾಮಯ್ಯ ಅವರಿಗೆ ಇಲ್ಲ, ನನಗೂ ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕಿ ಇರುವುದು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.

ಇನ್ನು, ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಎನ್ಕ್ರೇಜ್ ಮಾಡಿ ಹೇಳಿರಬಹುದು, ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಅವರೇ ನಮಗೆ ಹೈಕಮಾಂಡ್, ಅವರಿಗೆ ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು ಹೇಳಿದರು.

RELATED ARTICLES

Related Articles

TRENDING ARTICLES