ಬೆಂಗಳೂರು : ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಕರ್ನಾಟಕದಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಚಳಿ ಹೆಚ್ಚಾಗಿತ್ತು. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆಯಿದೆ.
ನಗರದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.