Wednesday, January 22, 2025

ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೆಂಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಹಗರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಗುರುತಿಸಿದ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಆಗಲಿದೆ, ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಾಗ ಹಗುರ ಇಲ್ಲವೇ ತುಂತುರು ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದರ ಹೊರತು ಕರ್ನಾಟಕದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES