Wednesday, January 15, 2025

ಧರ್ಮಸ್ಥಳದಲ್ಲಿ ವಿಜೃಂಭಣೆಯ ಲಕ್ಷದೀಪೋತ್ಸವ

ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ ಅಧಿವೇಶನವು ನಡೆಯಿತು.

ಇದಕ್ಕಾಗಿ ಶ್ರೀ ಕ್ಷೇತ್ರದಲ್ಲಿ ಸಕಲ ಸಿದ್ಧತೆಗೊಂಡಿದ್ದು, ಈ ಎಲ್ಲ ಕಾರ್ಯಕ್ರಮಕ್ಕೆ ನಿನ್ನೆ ಅಂದರೆ 23 ಬುಧವಾರ ಸಂಪನ್ನಗೊಂಡಿದೆ. ಇಂತಹ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಇದೀಗ ಲಕ್ಷ ದೀಪೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಒಟ್ಟು ಮೂರು ದಿನಗಳ ಕಾಲ ನಡೆಯೋ ಈ ದೀಪೋತ್ಸವ ಸಂಭ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ಆಯೋಜಿಸಲಾಗಿತ್ತು. ಇನ್ನು ದೀಪೋತ್ಸವಕ್ಕೆ ಬರೋ ಭಕ್ತರನ್ನ ಆಕರ್ಷಿಸೋ ಉದ್ದೇಶದಿಂದ ಇಡೀ ಕ್ಷೇತ್ರಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು. ಪ್ರತಿ ನಿತ್ಯ ರಾತ್ರಿ ಬಲಿ ಪೂಜೆ ನಡೆಯೋ ಮೂಲಕ ಮಂಜುನಾಥ ಸ್ವಾಮಿಗೆ ರಾತ್ರಿಯ ವಿಶೇಷ ಪೂಜೆ ನೆರವೇರಿಸಲಾಗುತ್ತೆ. ಹೀಗಾಗಿ ತಡರಾತ್ರಿಯವರೆಗೂ ಕ್ಷೇತ್ರದಲ್ಲಿ ಜನ ಸಂದಣಿ ಇರೋ ಕಾರಣದಿಂದ ನಿರಂತರ ಅನ್ನ ಸಂತರ್ಪಣೆಯೂ ನಡೆಯಿತ್ತು.

ಇನ್ನು, ಮಂಜುನಾಥನ ಕ್ಷೇತ್ರ ಸರ್ವ ಧರ್ಮ ಸಂದೇಶ ಸಾರೋದಕ್ಕೂ ಸಾಕ್ಷಿಯಾಗಿದೆ. ಪ್ರತಿ ನಿತ್ಯವೂ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆಗಳು ನಡೀತ್ತಿದ್ದು, ಎಂದಿಗಿಂತಲೂ ಎರಡು ಪಟ್ಟು ಹೆಚ್ಚಿನ ಭಕ್ತ ಸಮೂಹ ಕ್ಷೇತ್ರದತ್ತ ಧಾವಿಸ್ತಿದೆ. ಈ ಮಧ್ಯೆ ವಸ್ತು ಪ್ರದರ್ಶನ ಸೇರಿದಂತೆ ನಾನಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಕ್ಷೇತ್ರದಲ್ಲಿ ನಡೆಯಿತು.

RELATED ARTICLES

Related Articles

TRENDING ARTICLES