Friday, November 8, 2024

ದೇವನಹಳ್ಳಿಯಲ್ಲಿ ಸ್ಪರ್ಧೆ ನಡೆಸಲು ಕಾಂಗ್ರೆಸ್ ಪಕ್ಷದಲ್ಲಿ ಡಿಮ್ಯಾಂಡ್

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನ ಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ನಡೆಸಲು ಆಕಾಂಕ್ಷಿಗಳು ತಾ ಮುಂದು ನಾ ಮುಂದು ಅಂತಾ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕೆಪಿಸಿಸಿ ಕಛೇರಿಯಲ್ಲಿ 10 ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವ ಮಾಹಿತಿ ಲಭ್ಯವಾಗಿದೆ. ಇನ್ನೂ ಅರ್ಜಿ ಸಲ್ಲಿಸಲು ದಿನಗಳು ಬಾಕಿ ಇರೋದ್ರಿಂದ ಇನ್ನಷ್ಟು ಅರ್ಜಿಗಳು ಸಲ್ಲಿಸುವ ಮುನ್ಸೂಚನೆ ಇದೆ. ಇನ್ನೂ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ಘಟಾನುಘಟಿಗಳು ಇದ್ದಾರೆ. ಪ್ರಮುಖವಾಗಿ ಮಾಜಿ ಶಾಸಕ ವೆಂಕಟಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್, ಯೂತ್ ಕಾಂಗ್ರೆಸ್ ಮುಖಂಡ ಶಾಂತಕುಮಾರ್ ಸೇರಿದಂತೆ ಹತ್ತುಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲೂ ಸಹ ಸಿದ್ದರಾಮಯ್ಯ ಮತ್ತು ಡಿಕೆಶಿ ಆಪ್ತರು ಟಿಕೇಟ್ ಗೆ ಫೈಟ್ ನಡೆಸಿದ್ದಾರೆ.

ಇನ್ನೂ ಮಾಜಿ ಶಾಸಕ ಕೆ.ವೆಂಕಟಸ್ವಾಮಿ ತಮ್ಮ ಅವಧಿಯಲ್ಲಿ ಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಈ ಬಾರಿಯೂ ಟಿಕೇಟ್ ಕೇಳಲು ಮುಂದಾಗಿದ್ದಾರೆ. ಇನ್ನೂ ಕೆಪಿಸಿಸಿ ಪ್ರಧಾನ ಎಸಿ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್ ಮುಖಂಡ ಶಾಂತಕುಮಾರ್ ತಾವು ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿರುವ ಕಾರ್ಯಕ್ರಮಗಳನ್ನು ಮುಂದಿಟ್ಟು ಟಿಕೇಟ್ ಕೇಳಲು ಸಿದ್ಧರಾಗಿ ಕೆಪಿಸಿಸಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ ಇದರ ಜೊತೆಗೆ ಇನ್ನೂ ಅನೇಕ ಆಕಾಂಕ್ಷಿಗಳು ತಮ್ಮ ಸಮುದಾಯ, ವೈಯಕ್ತಿಕ ವರ್ಚಸ್ಸು ನಾ ಮೇಲೆ ಆಕಾಂಕ್ಷಿಗಳಾಗಿದ್ದಾರೆ. ಇನ್ನೂ ಪ್ರಮುಖವಾಗಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ ಸಹ ಸ್ಪರ್ಧೆ ನಡೆಸಲಿದ್ದಾರೆ ಎಂಬ ಬಲವಾದ ಮಾತುಗಳು ಕೇಳಿ ಬರುತ್ತಿವೆ.

ಒಟ್ಟಾರೆ ಈಗಾಗಲೇ ದೇವನಹಳ್ಳಿ ವಿಧಾನ ಸಭಾ ಮೀಸಲು ಕ್ಷೇತ್ರಕ್ಕೆ ಸಾಲು ಸಾಲು ಅರ್ಜಿಗಳು ಕೆಪಿಸಿಸಿ ಕಛೇರಿಗೆ ಹರಿದು ಬಂದಿದೆ ಆದರ ಜೊತೆಗೆ ಪ್ರಬಲ ಆಕಾಂಕ್ಷಿಯಾಗಿ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿಗೆ ಬರುತ್ತಿರುವುದು ಇತರೆ ಆಕಾಂಕ್ಷಿಗಳಿಗೆ ಇರಿಸು ಮುರುಸು ಉಂಟಾಗಿದೆ.

ರಾಮಾಂಜಿ.ಎಂ ಬೂದಿಗೆರೆ ಪವರ್ ಟಿವಿ ದೇವನಹಳ್ಳಿ

RELATED ARTICLES

Related Articles

TRENDING ARTICLES