Monday, May 13, 2024

ರಾಜ್ಯದಲ್ಲಿ 2 ದಿನ ಮಳೆ ಮುಂದುವರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಇಂದಿನಿಂದ 2 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಹಾಗೇ, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ಇಂದು ಕರ್ನಾಟಕದ12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 28ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES