Monday, December 23, 2024

ದೆಹಲಿಯತ್ತ ಸಿಎಂ ಬೊಮ್ಮಾಯಿ

ನವದೆಹಲಿ : ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಅಂದ್ರೆ ಮಂಗಳವಾರ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಗಳಿವೆ.

ಈ ವೇಳೆ ಸಂಪುಟ ವಿಸ್ತರಣೆ ಮತ್ತು ರಾಜಕೀಯ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ನಾಲ್ಕರಿಂದ ಐದು ತಿಂಗಳು ಮಾತ್ರ ಬಾಕಿ ಉಳಿದಿದೆ. ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬ ಒತ್ತಡ ಕೇಳಿ ಬರುತ್ತಿರುವ ಬೆನ್ನಲ್ಲೇ ಸಿಎಂ ದೆಹಲಿ ಪ್ರವಾಸ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಟೆನ್ಷನ್ ಶುರುವಾಗಿದೆ.

ಒಂದು ವೇಳೆ ಹೈಕಮಾಂಡ್​ ಗ್ರೀನ್ ಸಿಗ್ನಲ್ ನೀಡಿದ್ರೆ ಮುಂದಿನ ವಾರವೇ ಸಂಪುಟ ವಿಸ್ತರಣೆ ಆಗಬಹುದು. ಆದ್ರೆ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಬ್ಯುಸಿಯಾಗಿರುವ ಕಾರಣ, ಸಂಪುಟ ವಿಸ್ತರಣೆಗೆ ಅನುಮತಿ ಸಿಗೋದು ಅನುಮಾನ ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES