Friday, November 22, 2024

ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ : ಅಲೋಕ್​ ಕುಮಾರ್

ಬೆಳಗಾವಿ: ಕರ್ನಾಟಕ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಅಧಿವೇಶನವು ಸುಸೂತ್ರವಾಗಿ ನಡೆಯಬೇಕು. ಇದು ಚುನಾವಣೆ ವರ್ಷವಾಗಿರುವ ಕಾರಣ ಕಿಡಿಗೇಡಿಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಅಲೋಕ್​ ಕುಮಾರ್ ತಿಳಿಸಿದ್ರು.

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್​ ಕುಮಾರ್ ಅವರು, ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವ ಯಾವುದೇ ಚಟುವಟಿಕೆಗೆ ನಾವು ಅವಕಾಶ ಕೊಡುವುದಿಲ್ಲ. ಖಾಸಗಿ ಕಾರ್ಯಕ್ರಮಗಳಿಗೆ ಬಂದರೆ ನಮ್ಮ ಅಭ್ಯಂತರ ಇರುವುದಿಲ್ಲ ಎಂದರು.

ಬೆಳಗಾವಿ ಗಡಿಯಲ್ಲಿ 21 ಚೆಕ್ ​ಪೋಸ್ಟ್​ಗಳಿವೆ. ಗಡಿ ಭಾಗದ ಎಲ್ಲ ಎಸ್‌ಪಿಗಳಿಗೆ ಎಚ್ಚರಿಕೆಯಿಂದ ಇರುವಂತೆ ನಿರ್ದೇಶನ ನೀಡಿದ್ದೇವೆ. ಮಹಾರಾಷ್ಟ್ರ ಗಡಿಯಲ್ಲಿ ಇಂದು ಸಂಜೆಯಿಂದಲೇ ಪೊಲೀಸರು ಗಸ್ತು ಹೆಚ್ಚಿಸುತ್ತಾರೆ ಎಂದರು. ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್​​ಪಿ, ನಗರ ಪೊಲೀಸ್​ ಆಯುಕ್ತ, ಡಿಸಿಪಿಗಳು, ಡಿವೈಎಸ್​ಪಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ ಐಜಿಪಿ, ಕೊಲ್ಹಾಪುರ ಎಸ್​​​ಪಿ, ಸಾಂಗ್ಲಿ ಎಸ್​ಪಿ, ಸಿಂಧುದುರ್ಗ ಎಸ್​​ಪಿ, ಸಾವಂತವಾಡಿಯ ಡಿಎಸ್​ಪಿಗಳು ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES