Wednesday, January 22, 2025

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ

ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರ, ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಚಂಪಾ ಷಷ್ಠಿ ಪ್ರಯುಕ್ತ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಡಗರ, ಸಂಭ್ರಮದಿಂದ ನಡೆಯಿತು.

ರಥಾರೂಢರಾದ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ‌ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು.

ಕೊವಿಡ್ ನಿರ್ಬಂಧಗಳ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಬ್ರಹ್ಮರಥೋತ್ಸವಕ್ಕೆ ಹೆಚ್ಚಿನ ಜನರು ಸೇರಲು ಅವಕಾಶ ಸಿಕ್ಕಿರಲಿಲ್ಲ. ಇಂದು ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳು ನಡೆಯಲಿವೆ. ಇಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಕುರಿತು ಬ್ಯಾನರ್ ಹಾಕಿದ್ದು ವಿವಾದಕ್ಕೆ ಕಾರಣವಾಗಿತ್ತು. ಉತ್ಸವದ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 626ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 49 ಪಿಎಸ್ಐ, 14 ಇನ್​ಸ್ಪೆಕ್ಟರ್, 16 ಎಸಿಪಿ, 158 ಎಎಸ್ಐ, 148 ಹೆಡ್​ ಕಾನ್​​​​​ಸ್ಟೇಬಲ್, 236 ಪಿಸಿ, 22 ಹೋಂ ಗಾರ್ಡ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

RELATED ARTICLES

Related Articles

TRENDING ARTICLES