Friday, November 22, 2024

ಧರಣಿ ಮಂಡಲ ಮಧ್ಯದೊಳಗೆ ಎಲ್ಲರ ಕಥೆ ಮೇಲೆ ಕೆಳಗೆ

ಗುಳ್ಟು ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿಯ ಧರಣಿ ಮಂಡಲ ಮಧ್ಯದೊಳಗೆ ಟ್ರೈಲರ್ ಲಾಂಚ್ ಆಗಿದೆ. ಚಿತ್ರತಂಡಕ್ಕೆ ಸ್ಯಾಂಡಲ್​ವುಡ್ ಕಿಂಗ್ ಶಿವಣ್ಣ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದು, ಮೇಕಿಂಗ್ ಹಾಗೂ ಕಥೆಯಿಂದ ಭರವಸೆ ಮೂಡಿಸಿದೆ ಚಿತ್ರ. ಇಷ್ಟಕ್ಕೂ ಏನಿದರ ಅಸಲಿ ಕಥೆ ಅನ್ನೋದಕ್ಕೆ ಈ ಸ್ಪೆಷಲ್ ಸ್ಟೋರಿ ನೀವೇ ಓದಿ.

  • ಐಶಾನಿ & ನವೀನ್ ಜೋಡಿಗೆ ಶಿವಣ್ಣ- ವಸಿಷ್ಠ ಬೆನ್ನೆಲುಬು
  • ಡಿಸೆಂಬರ್ 2ಕ್ಕೆ ಡಾರ್ಕ್​ ಸಿಟಿಯ ಕ್ರೈಂ ಥ್ರಿಲ್ ಅನಾವರಣ
  • ಇದು ಸ್ಯಾಂಡಲ್​ವುಡ್ ಅಂಗಳದ ನೂತನ ಪ್ರಯೋಗ..!

ಟೀಸರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರೋ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಟ್ರೈಲರ್ ಇದು. ಚಿತ್ರದ ಟ್ರೈಲರ್​ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಡಿಜಿಟಲಿ ಲಾಂಚ್ ಮಾಡಿದ್ರೆ, ವೇದಿಕೆಯಲ್ಲಿ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ರು. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಟ್ರೈಲರ್ ಸಖತ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಳ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿರೋ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ. ಟ್ರೈಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ, ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ ಅಂತ ಹಾರೈಸಿದ್ರು.

ಶ್ರೀಧರ್ ಶಿಕಾರಿಪುರ ಮಾತನಾಡುತ್ತಾ ಇದು ನನ್ನ ಚೊಚ್ಚಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗಿನ ಕಥೆ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್​ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದರು.

ಗುಳ್ಟು ನಂತರ ಕೇಳಿದ ಇಂಟರೆಸ್ಟಿಂಗ್ ಸಬ್ಜೆಕ್ಟ್ ಇರೋ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್​ನಲ್ಲಿ ಸಾಧನೆ ಮಾಡಬೇಕು ಅಂದ್ಕೊಂಡಿರೋ ಹುಡ್ಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಅಂತಾರೆ ನಾಯಕ ನಟ ನವೀನ್ ಶಂಕರ್.

ನಿರ್ದೇಶಕರು ಕ್ರೈಂ ಡ್ರಾಮಾ ಸಿನಿಮಾ ಎಂದಾಗ ನಾನು ಸ್ವಲ್ಪನೂ ಯೋಚನೆ ಮಾಡ್ದೆ, ಕಥೆ ಕೇಳಿ ತುಂಬಾ ಖುಷಿ ಪಟ್ಟೆ. ಇಲ್ಲಿವರೆಗೂ ನಾನು ಮಾಡಿರುವ ಪಾತ್ರಕ್ಕಿಂತ ಕಂಪ್ಲೀಟ್ ವಿಭಿನ್ನವಾಗಿರೋ ಪಾತ್ರ ನಿರ್ವಹಿಸಿದ್ದೇನೆ. ಶ್ರೇಯ ಅನ್ನೋ ಡೋಂಟ್ ಕೇರ್ ಆಟಿಟ್ಯೂಡ್ ಇರೋ ಬೋಲ್ಡ್ ಹುಡ್ಗಿ ಅಂತ ತಮ್ಮ ಪಾತ್ರ ಹಾಗೂ ಸಿನಿಮಾ ಬಗ್ಗೆ ಸ್ಯಾಂಡಲ್​ವುಡ್ ಶಾಕುಂತ್ಲೆ ಮಾತನಾಡಿದ್ರು.

ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡು ದೊಡ್ಡ ತಾರಾಗಣವಿದೆ. ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್​ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಪವರ್ ಟಿವಿ

RELATED ARTICLES

Related Articles

TRENDING ARTICLES