Wednesday, January 22, 2025

ಚುನಾವಣಾ ಪ್ರಚಾರದಲ್ಲಿ ರವೀಂದ್ರ ಜಡೇಜಾ

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಪತ್ನಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಇದೀಗ ಜಡ್ಡು, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.

2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರವೀಂದ್ರ ಜಡೇಜಾ ಪತ್ನಿ ರಿವಾಬ ಜಡೇಜಾ, ಜಾಮ್‌ನಗರ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ರಿವಾಬ ಜಡೇಜಾ 2019ರಿಂದಲೇ ಸಕ್ರಿಯ ರಾಜಕಾರಣಕ್ಕೆ ಎಂಟ್ರಿಕೊಟ್ಟಿದ್ದಾರೆ. ಇದೀಗ ತಮ್ಮ ಪತ್ನಿಯನ್ನು ಗೆಲ್ಲಿಸಲು ರವೀಂದ್ರ ಜಡೇಜಾ, ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಇವರಿಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಸಾಥ್ ನೀಡಿದ್ದಾರೆ.

ಇನ್ನು, ರವೀಂದ್ರ ಜಡೇಜಾ, ಪ್ರಧಾನಿ ನರೇಂದ್ರ ಮೋದಿ ಜತೆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ‘ದೇಶದ ಹೆಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕೆ ನಾನು ಅವರಿಗೆ ಆಭಾರಿಯಾಗಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES