ಬೆಂಗಳೂರು : ಕರ್ನಾಟಕದ ಬೆಂಗಳೂರು , ಮೈಸೂರು, ಕೊಡಗು ಸೇರಿದಂತೆ ಅನೇಕ ಕಡೆ ಬೆಳಗಿನ ಜಾವ ವಿಪರೀತ ಚಳಿ ಶುರುವಾಗಿದೆ.
ನಿನ್ನೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿತ್ತು. ಆದರೆ, ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮೈಸೂರಿನಲ್ಲಿ ಇಂದಿನಿಂದ ಡಿ. 4ರವರೆಗೂ ಮಳೆಯಾಗಲಿದೆ. ಚಳಿಯ ಜೊತೆಗೆ ತುಂತುರು ಮಳೆಯೂ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.