Wednesday, January 22, 2025

ರಾಜ್ಯದ ನಿಲುವು ಸ್ಪಷ್ಟವಾಗಿದೆ : ಸಿಎಂ ಬೊಮ್ಮಾಯಿ

ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಬಂಧ ರಾಜ್ಯದ ನಿಲುವು ಸ್ಪಷ್ಟವಾಗಿದ್ದು, ನಮ್ಮ ನಿಲುವು ಸಾಂವಿಧಾನಿಕ ಹಾಗೂ ಕಾನೂನು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಗಡಿ ವಿವಾದ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ನಿಲುವು ಸ್ಪಷ್ಟವಾಗಿದೆ. ಮಹಾರಾಷ್ಟ್ರದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸುವುದಿಲ್ಲ. ನಮ್ಮ ನಿಲುವು ಸಾಂವಿಧಾನಿಕ ಮತ್ತು ಕಾನೂನು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ನಡುವೆ ಹಲವು ದಶಕಗಳಿಂದ ಸಂಘರ್ಷಕ್ಕೆ ಕಾರಣವಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಗಡಿ ವಿವಾದವನ್ನು ಬಗೆಹರಿಸುವುದು ಕೋರ್ಟ್ ವ್ಯಾಪ್ತಿಗೆ ಬರುತ್ತದೆಯೋ, ಇಲ್ಲವೋ ಎಂಬುದುರ ಕುರಿತು ಅಂತಿಮ ತೀರ್ಪು ಪ್ರಕಟವಾಗಬೇಕಿದೆ.

RELATED ARTICLES

Related Articles

TRENDING ARTICLES