Friday, May 17, 2024

ಸರ್ಕಾರಿ ನೌಕರರ ಮುಷ್ಕರ ಅಂತ್ಯ, ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹಾಜರ್

ಬೆಂಗಳೂರು : ಏಳನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿದ್ದ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯವಾಗಿದೆ.

ರಾಜ್ಯ ಸರ್ಕಾರ ಶೇ.17ರಷ್ಟು ವೇತನ ಹೆಚ್ಚಳ ಮಾಡುವ ಬಗ್ಗೆ ಅಧಿಕೃತ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭನೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದೆ.

ರಾಜ್ಯ ಸರ್ಕಾರವು ನೌಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಿ ಮನವೊಲಿಸಿದೆ. ಅಲ್ಲದೆ, ಸರ್ಕಾರ ಕೇವಲ ಒಂದು ದಿನದಲ್ಲೇ ವೇತನ ಹೆಚ್ಚಳ ನಿರ್ಧಾರ ಮಾಡಿರುವುದರಿಂದ ಸರ್ಕಾರಿ ನೌಕರರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಜೊತೆಗೆ, ನಾಳೆಯಿಂದ ಎಂದಿನಂತೆ ನೌಕರರು ಕೆಲಸಕ್ಕೆ ಮರಳಲಿದ್ದಾರೆ.

ಪ್ರತಿಭಟನೆ ಹಿಂಪಡೆಯುವಂತೆ ಮನವಿ
ಮುಷ್ಕರ ನಿರತ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ.17ರಷ್ಟು ವೇತನ ಹೆಚ್ಚಳ ಆದೇಶ ಜಾರಿ ಮಾಡಲಾಗಿದೆ. ಮುಷ್ಕರ ನಿರತ ನೌಕರರು ಈಗಿನಿಂದಲೇ ಪ್ರತಿಭಟನೆಯನ್ನು ಹಿಂಪಡೆಯುವಂತೆ ಹೇಳಿದ್ದಾರೆ.

ಒಪಿಎಸ್ ಜಾರಿಗೆ ಸ್ಪಂದೆನೆ
ಸರ್ಕಾರಿ ನೌಕರರ ವೇತನ ಹೆಚ್ಚಳ ಭರವಸೆ ಬೆನ್ನಲ್ಲೇ ಎನ್​ಪಿಎಸ್ ರದ್ದು ಕುರಿತು ನಿರ್ಧರಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆ ಮೂಲಕ ಹಳೇ ಪಿಂಚಣಿ ವ್ಯವಸ್ಥೆ ಒಪಿಎಸ್ ಜಾರಿಗೆ ಸರ್ಕಾರಿ ನೌಕರರು ಹಲವು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.

RELATED ARTICLES

Related Articles

TRENDING ARTICLES