Thursday, May 2, 2024

ಅದ್ಭುತ : ಜಡೇಜಾ 500 ವಿಕೆಟ್.. 5,000 ರನ್

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ. ಟೀಂ ಇಂಡಿಯಾ ಸ್ಟಾರ್ ಆಲ್​ರೌಂಡರ್ ಸರ್ ರವೀಂದ್ರ ಜಡೇಜಾ ಅಪರೂಪದ ಸಾಧನೆಯೊಂದನ್ನು ಮಾಡಿದ್ದಾರೆ.

ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಭಾರತ ಇಂದು ಮೂರನೇ ಟೆಸ್ಟ್ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟರ್ ಟ್ರಾವಿಸ್ ಹೆಡ್ ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅವರು ಅಂತರಾಷ್ಟ್ರೀಯ ಪಂದ್ಯಗಳಲ್ಲಿ 500 ವಿಕೆಟ್ ಹಾಗೂ 5,000 ರನ್​ ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಅಂತರಾಷ್ಟ್ರೀಯ ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಅವರು ಈಗಾಗಲೇ 5,523 ರನ್​ ಗಳಿಸಿದ್ದಾರೆ. ಜಡೇಜಾಗೂ ಮೊದಲು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರರಾಗಿದ್ದಾರೆ. ಕಪಿಲ್ ದೇವ್ ಅವರು 9,031 ರನ್ ಹಾಗೂ 687 ವಿಕೆಟ್ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾದ್ದೇ ದರ್ಬಾರ್

ಐಸಿಸಿ ಟೆಸ್ಟ್, ಏಕದಿನ, ಟಿ-20ಯಲ್ಲಿ ಭಾರತದ ಆಟಗಾರರು ಮೇಲುಗೈ ಸಾಧಿಸಿದ್ದಾರೆ. ಐಸಿಸಿ ಟೆಸ್ಟ್ ಬೌಲರ್​ಗಳ ರ್ಯಾಂಕಿಂಗ್ ಬಿಡುಗಡೆಗೊಂಡಿದ್ದು, ಭಾರತದ ಆರ್​. ಅಶ್ವಿನ್ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ. ಆ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಭಾರತೀಯ ದರ್ಬಾರ್ ಮುಂದುವರಿದಿದೆ.

ಇವರಿಗೆಲ್ಲಾ ನ.1 ಪಟ್ಟ

ಇನ್ನೂ, ಐಸಿಸಿ ಏಕದಿನ ಹಾಗೂ ಟಿ-20 ತಂಡದ ರ್ಯಾಂಕಿಂಗ್​ನಲ್ಲಿ ಭಾರತ ಪ್ರಥಮ ಸ್ಥಾನ ಅಲಂಕರಿಸಿದೆ. ಸೂರ್ಯಕುಮಾರ್ ಟಿ-20ಯಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ನಂ.1 ಬೌಲರ್ ಆಗಿದ್ದರೆ, ಟೆಸ್ಟ್​ ಆಲ್​ರೌಂಡರ್ ಪಟ್ಟಿಯಲ್ಲಿ ರವೀಂದ್ರ ಜಡೇಜಾ ನಂ.1 ಸ್ಥಾನದಲ್ಲಿ ಮುಂದುವರಿದ್ದಾರೆ.

ಇದೀಗ ಈ ಸಾಲಿಗೆ ಆರ್. ಅಶ್ವಿನ್ ಸಹ ಸೇರಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತೀಯ ಆಟಗಾರರ ದರ್ಬಾರ್ ಮುಂದುವರಿದಿದೆ.

RELATED ARTICLES

Related Articles

TRENDING ARTICLES