Friday, November 22, 2024

150 ರೋಡ್ ಶೋ, 75 ಬೃಹತ್ ಸಾರ್ವಜನಿಕ ಸಭೆ : ಇದೇ ಬಿಜೆಪಿ ಸ್ಟ್ರಾಟರ್ಜಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಸಮರವಾಗಿದೆ. ಈಗಾಗಲೇ ರಾಜ್ಯದಲ್ಲಿ ಚುನಾವಣಾ ಹಂಗಾಮ ಕಳೆಕಟ್ಟಿದ್ದು, ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅದರಂತೆ, ಬಿಜೆಪಿ ಪಕ್ಷ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಿದೆ.

ಕರ್ನಾಟಕದಲ್ಲಿ 8,000 ಕಿಲೋ ಮೀಟರ್ ಸಂಚರಿಸಿ, 75 ಬೃಹತ್ ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದೇವೆ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದ್ದಾರೆ.

ದೇಶಾದ್ಯಂತ 27 ಬುಡಕಟ್ಟು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುತ್ತೇವೆ. ಒಟ್ಟು 36 ಸಾವಿರ ಬುಡಕಟ್ಟು ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುತ್ತೇವೆ. ಬುಡಕಟ್ಟು ಜನರ ವಸತಿ ಪ್ರದೇಶವನ್ನು ಬದಲಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ವಿಜಯ ಸಂಕಲ್ಪ ರಥಕ್ಕೆ ಚಾಲನೆ

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ಗೌರಿಶಂಕರ ಮಟಪದಲ್ಲಿ ಬಿಜೆಪಿ ಬಾವುಟ ತೋರುವ ಮೂಲಕ ಮೊದಲನೇ ಹಂತದ ವಿಜಯ ಸಂಕಲ್ಪ ರಥಯಾತ್ರೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಇನ್ನಿತರ ಮುಖಂಡರಿದ್ದರು.

RELATED ARTICLES

Related Articles

TRENDING ARTICLES