Wednesday, January 22, 2025

ಇಂದೋರ್ ಟೆಸ್ಟ್ : ಆಸ್ಟ್ರೇಲಿಯಾ ಆಲೌಟ್

ಬೆಂಗಳೂರು : ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದೋರ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ನ ಎರಡನೇ ದಿನ ಅತಿಥೇಯ ಆಸ್ಟ್ರೇಲಿಯಾ ತಂಡವು197 ರನ್ ಗೆ ಆಲೌಟ್ ಆಗಿದೆ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 109 ರನ್ ಗಳಿಗೆ ಆಲೌಟ್ ಆಗಿತ್ತು. ಎರಡನೇ ದಿನ ಆಸ್ಟ್ರೇಲಿಯಾ ಬ್ಯಾಟರ್ ಸ್ಮಿತ್ (26), ಹ್ಯಾಂಡ್ಸ್ ಕಂಬ್(19) , ಗ್ರೀನ್ (21), ಕ್ಯಾರಿ (3) ಸ್ಟಾರ್ಕ್ (1), ಮರ್ಫಿ (0) ಭಾರತದ ಬೌಲಿಂಗ್ ದಾಳಿಗೆ ಪೆವಿಲಿಯನ್ ಪೆರೇಡ್ ನಡೆಸಿದರು.

ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್, ಉಮೇಶ್ ಯಾದವ್ 3 ವಿಕೆಟ್ ಹಾಗೂ ಆರ್. ಅಶ್ವಿನ್ 3 ವಿಕೆಟ್ ಕಬಳಿಸಿದರು. ಇನ್ನೂ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 88 ರನ್ ಮುನ್ನಡೆ ಸಾಧಿಸಿದೆ.

ಜಡೇಜಾ 500 ವಿಕೆಟ್.. 5,000 ರನ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ. ಟೀಂ ಇಂಡಿಯಾ ಸ್ಟಾರ್ ಆಲ್​ರೌಂಡರ್ ಸರ್ ರವೀಂದ್ರ ಜಡೇಜಾ ಅಪರೂಪದ ಸಾಧನೆಯೊಂದನ್ನು ಮಾಡಿದ್ದಾರೆ.

ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಭಾರತ ಇಂದು ಮೂರನೇ ಟೆಸ್ಟ್ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟರ್ ಟ್ರಾವಿಸ್ ಹೆಡ್ ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅವರು ಅಂತರಾಷ್ಟ್ರೀಯ ಪಂದ್ಯಗಳಲ್ಲಿ 500 ವಿಕೆಟ್ ಹಾಗೂ 5,000 ರನ್​ ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

 

RELATED ARTICLES

Related Articles

TRENDING ARTICLES