Wednesday, January 22, 2025

ನಟ ಸಾಧು ಕೋಕಿಲಾಗೆ ಕಾಂಗ್ರೆಸ್ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಟ್ಟ

ಬೆಂಗಳೂರು: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಸಮಾರಂಭಗಳಲ್ಲಿ ಸಕ್ರಿಯರಾಗಿದ್ದ ಹಾಸ್ಯ ನಟ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ಕೆಪಿಸಿಸಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ನೂತನವಾಗಿ ಕಾಂಗ್ರೆಸ್ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿನಂದಿಸಿದ್ದಾರೆ.

ಡಿ.ಕೆ ಶಿವಕುಮಾರ್‌ ಅವರು ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡ ನಾಡಿನ ಜನಮೆಚ್ಚಿನ ಕಲಾವಿದ ಸಾಧು ಕೋಕಿಲ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇವೆ. ತಮ್ಮ ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ತ್ರಿಪುರಾ ಚುನಾವಣೆ ಫಲಿತಾಂಶ : ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ

ನಟ ಸಾಧುಕೋಕಿಲ ಅವರು ಹಲವು ದಿನಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಜೊತೆಗೆ, ಪಕ್ಷದ ಸಮಾರಂಭಗಳಲ್ಲಿ ಸಕ್ರಿಯರಾಗಿದ್ದರು. ಕಾಂಗ್ರೆಸ್ ನ ಮಹತ್ವಕಾಂಕ್ಷೆಯ ಮೇಕೆದಾಟು ಪಾದಯಾತ್ರೆಯಲ್ಲಿಯೂ ಸಾಧುಕೋಕಿಲ ಅವರು ಭಾಗವಹಿಸಿದ್ದರು.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಸ್ಯಾಂಡಲ್ ವುಡ್ ಸ್ಟಾರ್ಸ್ ಪಕ್ಷ ಸೇರ್ಪಡೆ, ನೂತನ ಜವಾಬ್ದಾರಿ ಪಡೆಯುತ್ತಿರುವುದು ಚುನಾವಣಾ ಕಣವನ್ನು ಮತ್ತಷ್ಟು  ರಂಗೇರಿಸುತ್ತಿದೆ.

RELATED ARTICLES

Related Articles

TRENDING ARTICLES