Thursday, April 18, 2024

ಸುಳ್ಳು ಹೇಳುವುದು ಕಾಂಗ್ರೆಸ್ ಜಾಯಮಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಜನರಿಗೆ ಸುಳ್ಳು ಹೇಳುವುದು ಕಾಂಗ್ರೆಸ್ ಪಕ್ಷದ ಜಾಯಮಾನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಭಾಗವಹಿಸಿ ಅವರು ಮಾತನಾಡಿದ್ದಾರೆ.

ರಾಜ್ಯದ ಜನರಿಗೆ ದೌರ್ಭಾಗ್ಯ

ಕಾಂಗ್ರೆಸ್ ನವರು ತಮ್ಮ ಐದು ವರ್ಷದ ಆಡಳಿತದಲ್ಲಿ ರಾಜ್ಯದ ಪ್ರತಿ ಜನರ ಮೇಲೆ ಸಾಲ ಹೊರೆಯನ್ನು ಹೊರಿಸಿದ್ದಾರೆ. ಕಾಂಗ್ರೆಸ್ ನವರು ರಾಜಕೀಯ, ಜಾತಿ, ಧರ್ಮದ ವಿಷಯದಲ್ಲಿ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ  ಮಾಡುತ್ತಾರೆ. ವಿವಿಧ ಭಾಗ್ಯಗಳನ್ನು ನೀಡುತ್ತೇವೆ ಎಂದು ಜನರ ಪಾಲಿಗೆ ದೌರ್ಭಾಗ್ಯವನ್ನು ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸುಳ್ಳು, ಮೋಸ ಮತ್ತು ದ್ರೋಹ ಬಿಜೆಪಿಯ ಡಿಎನ್‌ಎಯಲ್ಲಿದೆ – ವಿಪಕ್ಷ ನಾಯಕ ಸಿದ್ದರಾಮಯ್ಯ

ಚುನಾವಣೆ ಬರುತ್ತಿದೆ ಎಂದು ಸುಳ್ಳು ಭರವಸೆ

ಕಾಂಗ್ರೆಸ್ ಅವಧಿಯಲ್ಲಿ ದುರ್ಬಲ ವರ್ಗದವರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾದರು. ಅವರ ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿವನ್ನು 5 ಕೆಜಿಗೆ ಇಳಿಸಿದರು. ಚುನಾವಣೆ ಬಂದ ಸಂದರ್ಭದಲ್ಲಿ 5 ಕೆಜಿಯನ್ನು 7 ಕೆಜಿಗೆ ಹೆಚ್ಚಿಸಿದರು. ಈಗ 10 ಕೆಜಿ ಅಕ್ಕಿ  ನೀಡುತ್ತೇವೆಂದು ಭರವಸೆ ನೀಡುತ್ತಿದ್ದಾರೆ. ಈ ರೀತಿ ಜನರಿಗೆ ಸುಳ್ಳು ಹೇಳುವುದು ಕಾಂಗ್ರೆಸ್ ಪಕ್ಷದ ಜಾಯಮಾನವಾಗಿದೆ ಎಂದು ಕುಟುಕಿದ್ದಾರೆ.

ಮತಬ್ಯಾಂಕ್ ಗಾಗಿ ದುರ್ಬಲ ವರ್ಗ ಬಳಕೆ

ಕಾಂಗ್ರೆಸ್ ನವರು ದೀನದಲಿತರು, ದುರ್ಬಲವರ್ಗದವರಿಗೆ ಸಾಮಾಜಿಕ ನ್ಯಾಯ ಎಂದು ಕೇವಲ ಭಾಷಣ ಮಾಡುತ್ತಾರೆ. ಆ ಪಕ್ಷ ದುರ್ಬಲ ಸಮುದಾಯಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿತು. ನಮ್ಮ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಳ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿತು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಆ.. ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಬಿಜೆಪಿಗೆ ಸ್ಪಷ್ಟ ಬಹುಮತ ಪಕ್ಕಾ!

ಬಿಜೆಪಿ ಪಕ್ಷವು ಬಸವಣ್ಣನವರ ಆದರ್ಶಗಳ ಹಾದಿಯಲ್ಲಿ ನಡೆಯುತ್ತಿರುವ ಏಕೈಕ ಪಕ್ಷ. ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಅಮೃತ ಕಾಲವನ್ನು ಸಾಧಿಸಲು ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಬಿ. ಶ್ರೀರಾಮುಲು, ಪ್ರಭು ಚೌಹಾಣ್ ಮತ್ತಿತರರ ನಾಯಕರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES