Tuesday, May 7, 2024

ನಿಸ್ಪಕ್ಷಪಾತವಾಗಿ ತನಿಖೆಗೆ ಆದೇಶ ನೀಡುತ್ತೇವೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಿಸ್ಪಕ್ಷಪಾತವಾಗಿ ತನಿಖೆಗೆ ಆದೇಶ ನೀಡುತ್ತೇವೆ. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ ಎಂದು ಹೇಳಿದ್ದಾರೆ.

ಎಸಿಬಿ ರಚಿಸಿ ಲೋಕಾಯುಕ್ತ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ. ಅದನ್ನು ಮಾಡಿರುವುದು ಕಾಂಗ್ರೆಸ್. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ಮಾಡಿದ್ದೇವೆ. ಬಿಜೆಪಿ ಸರ್ಕಾರ ಕೊಟ್ಟಿರುವುದೇ ಅದಕ್ಕೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ಇರುವುದೇ ಇಂತಹ ಭ್ರಷ್ಟಾಚಾರ ನಿಗ್ರಹಕ್ಕೆ. ಅದು ಸರ್ವ ಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ, ಇದರಲ್ಲಿ ಸಮಗ್ರ ತನಿಖೆಯಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಪ್ರಶಾಂತ ಮಾಡಾಳ ಪ್ರಶಾಂತ ಮಾಡಾಳ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಎಂದು ಹೇಳಲಾಗಿದೆ.

RELATED ARTICLES

Related Articles

TRENDING ARTICLES