Saturday, April 20, 2024

ಧೋನಿ, ಅಭಿಷೇಕ್ ಬಚ್ಚನ್ ಹೆಸರಲ್ಲಿ ನಕಲಿ ಕ್ರೆಡಿಟ್ ಕಾರ್ಡ್ : ಐವರ ಬಂಧನ

ಬೆಂಗಳೂರು : ನಕಲಿ ಗುಂಪೊಂದು ಬಾಲಿವುಡ್ ನಟ ನಟಿಯರು ಹಾಗೂ ಕ್ರಿಕೆಟಿಗರ ಹೆಸರಲ್ಲಿ ನಕಲಿ ಕ್ರೆಡಿಟ್ ಕಾರ್ಡನ್ನು ಪಡೆದು ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆನ್‌ಲೈನ್‌ನಲ್ಲಿ ಲಭ್ಯವಿರುವ ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಜಿಎಸ್‌ಟಿ ಗುರುತಿನ ಸಂಖ್ಯೆಗಳಿಂದ ಪ್ಯಾನ್ ವಿವರಗಳನ್ನು ಪಡೆದುಕೊಂಡು ಅವುಗಳನ್ನು ಬಳಸಿ ಪುಣೆ ಮೂಲದ ಫಿನ್‌ಟೆಕ್ ಸ್ಟಾರ್ಟ್ಅಪ್ ಒನ್ ಕಾರ್ಡ್ ನಿಂದ ಕ್ರೆಡಿಟ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಸುನಿಲ್ ಕುಮಾರ್, ಮೊಹಮದ್ ಆಸಿಫ್, ಪುನೀತ್, ಪಂಕಜ್, ವಿಶ್ವ ಭಾಸ್ಕರ್ ಶರ್ಮಾ ಬಂಧಿತ ಆರೋಪಿಗಳು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಧೋನಿ, ಅಭಿಷೇಕ್ ಬಚ್ಚ ಹೆಸರು ಬಳಕೆ

ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ, ಬಾಲಿವುಡ್ ತಾರೆಯರಾದ ಅಭಿಷೇಕ್ ಬಚ್ಚನ್, ಶಿಲ್ಪಾ ಶೆಟ್ಟಿ, ಮಾಧುರಿ ದೀಕ್ಷಿತ್, ಇಮ್ರಾನ್ ಹಶ್ಮಿ ಅವರ ಹೆಸರು ಮತ್ತು ವಿವರಗಳನ್ನು ವಂಚಕರು ಬಳಸಿದ್ದಾರೆ ಎಂದು ತಿಳಿದುಬಂದಿದೆ.

ಗೂಗಲ್‌ನಿಂದ ಸೆಲೆಬ್ರಿಟಿಗಳ ವಿವರ

ವಿಚಾರಣೆ ವೇಳೆ ವಂಚನೆಗೆ ಸಂಬಂಧಿಸಿದ ಕಾರ್ಯಾಚರಣೆಯ ವಿಧಾನವನ್ನು ಆರೋಪಿಗಳು ಬಿಚ್ಚಿಟ್ಟಿದ್ದಾರೆ. ಈ ಸೆಲೆಬ್ರಿಟಿಗಳ ಜಿಎಸ್‌ಟಿ ವಿವರಗಳನ್ನು ಆರೋಪಿಗಳು ಗೂಗಲ್‌ನಲ್ಲಿ ಪಡೆಯುತ್ತಿದ್ದರು. ಜಿಎಸ್‌ಟಿಯ ಮೊದಲೆರಡು ಸಂಖ್ಯೆಗಳು ಸ್ಟೇಟ್ ಕೋಡ್ ಮತ್ತು ನಂತರದ ಸಂಖ್ಯೆಗಳು ಪ್ಯಾನ್ ಸಂಖ್ಯೆಗಳು ಎಂಬುದು ಆರೋಪಿಗಳಿಗೆ ತಿಳಿದಿತ್ತು ಎಂದು ಪೊಲೀಸರು ಹೇಳಿದ್ದಾರೆ.

ವಾಮಮಾರ್ಗದ ಮೂಲಕ ಪ್ಯಾನ್‌ ಕಾರ್ಡ್‌ಗಳನ್ನು ತಯಾರಿಸಿ ಅವುಗಳ ಮೇಲೆ ತಮ್ಮ ಚಿತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ವಿಡಿಯೋ ಪರಿಶೀಲನೆಯ ಸಮಯದಲ್ಲಿ ಚಿತ್ರ ಹೊಂದಿಕೆಯಾಗುತ್ತಿತ್ತು. ಅಭಿಷೇಕ್ ಬಚ್ಚನ್ ಅವರ ಪ್ಯಾನ್ ಕಾರ್ಡ್‌ನಲ್ಲಿ ಅವರ ಪ್ಯಾನ್ ಮತ್ತು ಜನ್ಮ ದಿನಾಂಕವಿದೆ. ಆದರೆ, ಚಿತ್ರ ಮಾತ್ರ ಆರೋಪಿಗಳಲ್ಲಿ ಒಬ್ಬನದ್ದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES