Wednesday, April 24, 2024

ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಫರ್ ಬಂದಿಲ್ಲ : ಸಚಿವ ಸೋಮಶೇಖರ್

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜಕೀಯ ನಾಯಕರು ಪಕ್ಷ ತೊರೆದು ಬೇರೆ ಪಕ್ಷ ಸೇರುವ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಈ ಬಗ್ಗೆ ಬಿಜೆಪಿ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದು ನನಗೆ ಯಾವುದೇ ಆಫರ್ ಇಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್‌ಗಳು ಬರಲಿಲ್ಲ. ಸಚಿವ ನಾರಾಯಣ ಗೌಡ ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ನನಗೆ ಆಫರ್ ಬರಲಿಲ್ಲ ಎಂದು ಸೋಮಶೇಖರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಆ ಕೆಲಸವನ್ನು ಮಾಡುತ್ತಿದ್ದೇನೆ. ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸ್ಪೀಡ್ ಗೆ ನಾನು ಬ್ರೇಕ್ ಹಾಕುತ್ತಿದ್ದೇನೆಯೇ ಹೊರತು ಕಾಂಗ್ರೆಸ್ ಅಲ್ಲ : ಎಚ್.ಡಿ ಕುಮಾರಸ್ವಾಮಿ

ತಿಂಗಳಿನಿಂದ ನಾನು ಮೈಸೂರಿಗೆ ಬಂದಿಲ್ಲ

ಮೈಸೂರಿಗೆ ಒಂದು ತಿಂಗಳಿನಿಂದ ಬರದಿರುವುದಕ್ಕೆ ಚುನಾವಣೆ ಕಾರಣವಲ್ಲ. ಇಲಾಖೆಯ ಬೇರೆ ಬೇರೆ ಕಾರ್ಯಕ್ರಮಗಳ ಕಾರಣದಿಂದಾಗಿ ಬೇರೆ ಜಿಲ್ಲೆಗಳಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಬರಲಿಲ್ಲ ಅಷ್ಟೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ನನಗೆ ಬೆಂಗಳೂರು ಜವಾಬ್ದಾರಿ ಇದೆ. ಅಲ್ಲಿ ಆ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ. ಲೋಕಾಯುಕ್ತ ಬಲಪಡಿಸಿದ ಕಾರಣಕ್ಕೆ ಇಂತಹ ದಾಳಿ ನಡೆದಿದೆ. ನನಗೆ ಇನ್ನೂ ಹೆಚ್ಚಿನ ವಿವರಗಳು ಬರಲಿಲ್ಲ ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ.

RELATED ARTICLES

Related Articles

TRENDING ARTICLES