ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ ಸಂಬಂಧ ಬಿಜೆಪಿ ವಿರುದ್ಧ ಹರಿಹಾಯ್ದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ಕೊಟ್ಟಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದಿನ ಕಾಂಗ್ರೆಸ್ ಸರ್ಕಾರದ ರೀತಿ ಅವರನ್ನು ಹಿಡಿಯುವುದು, ಇವರನ್ನು ಬಿಡುವುದು ಎಂಬ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಭ್ರಷ್ಟಾಚಾರದಿಂದ ತಪ್ಪಿಸಿಕೊಳ್ಳಲೆಂದೇ ಸಿದ್ದರಾಮಯ್ಯ ಲೋಕಾಯುಕ್ತ ಡಮ್ಮಿ ಮಾಡಿ ಎಸಿಬಿ ಜಾರಿಗೆ ತಂದರು. ಅಲ್ಲದೆ ತನಗೆ ಬೇಕಾದ ಅಧಿಕಾರಿಗಳನ್ನು ಹಾಕಿಕೊಂಡು ಏನೇನು ಮಾಡಿದರು ಎಂಬುದು ಎಲ್ಲರಿಗು ಗೊತ್ತಿದೆ ಎಂದು ಸಿದ್ದರಾಮಯ್ಯ ಅವರಿಗೆ ಕುಟುಕಿದ್ದಾರೆ.
ಇದನ್ನೂ ಓದಿ :
ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಮಿಷನ್ ಪಡೆದಿರುವುದು ಮತ್ತಹ ಅವರ ಮನೆಯಲ್ಲಿ ಸಿಕ್ಕಿ 6 ಕೋಟಿ ಹಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ ಎಂದು ಇದೇ ವೇಳೆ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೈ ನಾಯಕರಿಗೆ ಮಾತನಾಡುವ ನೈತಿಕತೆಯೇ ಇಲ್ಲ
ನ್ಯಾಯಾಲಯವೇ ಎಸಿಬಿ ರದ್ದು ಮಾಡಿ, ಲೋಕಾಯುಕ್ತವನ್ನು ತಂದಿದೆ. ಲೋಕಾಯುಕ್ತಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡಿದ್ದೇವೆ. ಮಾಡಾಳು ವಿರೂಪಾಕ್ಷಪ್ಪ ಅವರದ್ದು ವೈಯಕ್ತಿಕ ವಿಚಾರ. ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ತಿಳಿಸಿದರು.
ಅರಸೀಕೆರೆಯಲ್ಲಿ ನಡೆದ ಬೆಂಗಾವಲು ವಾಹನ ಡಿಕ್ಕಿ ಎಂಬ ವಿಚಾರ ಸುಳ್ಳು. ನನಗೆ ಬೆಂಗಾವಲಿಗೆ ಇದ್ದ ಎರಡು ವಾಹನಗಳು ನನ್ನ ಜೊತೆಗೆ ಇವೆ. ಆದರೆ, ನಮ್ಮ ಹಿಂದೆ ಬಂದ ಪೊಲೀಸ್ ವಾಹನವೊಂದು ಡಿಕ್ಕಿಯಾಗಿದೆ. ಅವರಿಗೆ ಕಾನೂನು ರೀತಿ ಪರಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.