Monday, April 28, 2025

ಮಾಡಾಳ್ ಕೋಟಿ ಕೋಟೆ : ವಿರೂಪಾಕ್ಷಪ್ಪ ‘ನನ್ನ ಆಪ್ತ’ ಎಂದ ಬಿಎಸ್ ವೈ

ಬೆಂಗಳೂರು : ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟ್ಯಂತರ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೈಲಹೊಂಗಲದಲ್ಲಿ ಮಾತನಾಡಿರುವ ಬಿಎಸ್ ವೈ, ಲಂಚ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಕಾನೂನು ಚೌಕಟ್ಟಿನಲ್ಲಿ ಆರೋಪಿಗಳ ಮೇಲೆ ಕ್ರಮಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ. ಈ ಪ್ರಕರಣದ ಬಗ್ಗೆ ನಾನು ಹೆಚ್ಚು ಏನನ್ನೂ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ತೀರ್ಮಾನ ಮಾಡಲು ಆಗುತ್ತಾ?

ಲೋಕಾಯುಕ್ತ ಸಮಗ್ರ ತನಿಖೆ ಮಾಡುತ್ತಿದೆ. ಲೋಕಾಯುಕ್ತ ಯಾರ ಮೇಲೆ ಕ್ರಮ ಕೈಗೊಳ್ಳುತ್ತದೆ ಯಾರ ಮೇಲೆ ಕ್ರಮ ಕೈಗೊಳ್ಳಬೇಕೆಂದು ನಾನು ತೀರ್ಮಾನಿಸಲು ಆಗಲ್ಲ. ಕಾಂಗ್ರೆಸ್​ನವರು ತೀರ್ಮಾನ ಮಾಡಲು ಆಗಲ್ಲ. ಕಾನೂನು ಪ್ರಕಾರ ಲೋಕಾಯುಕ್ತ ತೀರ್ಮಾನ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಕೂಡ ನನ್ನ ಆಪ್ತ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಯಡಿಯೂರಪ್ಪ ಆಪ್ತರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್ ವೈ ಪ್ರತಿಕ್ರಿಯೆ ನೀಡಿದ್ದಾರೆ. ಮಾಡಾಳ್​ ವಿರೂಪಾಕ್ಷಪ್ಪ ಅಷ್ಟೇ ಅಲ್ಲ, ಸಿದ್ದರಾಮಯ್ಯ ಕೂಡ ನನ್ನ ಆಪ್ತ. ಎಲ್ಲರೂ ನನ್ನ ಆಪ್ತರೆ ಎನ್ನುವ ಮೂಲಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

RELATED ARTICLES

Related Articles

TRENDING ARTICLES