ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ ಸಂಬಂಧ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರನ್ನು ಪಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡುರಸ್ತೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಖಾಲಿ ಕುರ್ಚಿಗಳಿಗೆ ಸಿದ್ದರಾಮಯ್ಯ ಭಾಷಣ : ಬಿಜೆಪಿಗರಿಗೆ ಆಹಾರವಾದ್ರ ಸಿದ್ದು..!
ಪ್ರತಿಭಟನೆ ವೇಳೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಬೊಮ್ಮಾಯಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಅಲ್ಲದೆ, ಇದೊಂದು ಭ್ರಷ್ಟ ಸರ್ಕಾರ ಎಂದು ಟೀಕಿಸಿದ್ದಾರೆ.
ಭ್ರಷ್ಟಾಸೂರ ಸರ್ಕಾರ ಎಂದ ಸುರ್ಜೇವಾಲ
ಪ್ರತಿಭಟನೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲ, ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ. ಭ್ರಷ್ಟಾಸೂರ ಬೊಮ್ಮಾಯಿ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡುತ್ತಿದೆ. ದೇಶದಲ್ಲಿ ಯಾರನ್ನಾದರೂ ಕೇಳಿ ಬೊಮ್ಮಾಯಿ, ಯಡಿಯೂರಪ್ಪ ಏನೂ ಅಂತಾ. ಆಗ ಜನ ಹೇಳ್ತಾರೆ PayCM (ಪೇ ಸಿಎಂ) ಅಂತ ಹೇಳ್ತಾರೆ. ಬಿಜೆಪಿ ಅಂದ್ರೆ ಲಂಚ.. ಲಂಚ.. ಲಂಚ ಎಂದು ವಾಗ್ದಾಳಿ ನಡೆಸಿದ್ದಾರೆ.