Sunday, December 22, 2024

ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಆರೋಗ್ಯ ಇಲಾಖೆ : ಏಪ್ರಿಲ್ 1 ರಿಂದಲೇ ಜಾರಿ

ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಿಸಿದೆ. ಏಪ್ರಿಲ್‌ 1 ರಿಂದ ಇದು ಅನ್ವಯವಾಗಲಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ನೀಡಿದ್ದ ಭರವಸೆಯಂತೆಯೇ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ವೇತನ ಹೆಚ್ಚಳ ಮಾಡುವ ಆಗ್ರಹ ಬಂದಿತ್ತು. ಈ ವೇಳೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ವೇತನ ಹೆಚ್ಚಳ ಮಾಡಲು ಕ್ರಮ ವಹಿಸುವ ಬಗ್ಗೆ ಆಶ್ವಾಸನೆ ನೀಡಿದ್ದರು.

ಇದನ್ನೂ ಓದಿ : ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ..!

ಕಡಿಮೆ ಸಂಭಾವನೆ ನೌಕರರಿಗೆ ಎಷ್ಟು ಹೆಚ್ಚಳ?

ಕೆಲಸಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯನಿರ್ವಹಿಸಿದ ಎನ್‌ಎಚ್‌ಎಂ ಮೆಡಿಕಲ್‌ ಅಧಿಕಾರಿಗಳಿಗೆ (ಎಂಬಿಬಿಎಸ್‌, ಆಯುಷ್‌, ಆರ್‌ಬಿಎಸ್‌ಕೆ, ದಂತವೈದ್ಯ ಸರ್ಜನ್‌ಗಳು) ಕೂಡ ಶೇ.15 ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ.

ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3ರಿಂದ 5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5ರಿಂದ 10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15 ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ : ಮಹಿಳೆಯರ ರಕ್ಷಣೆ ದೃಷ್ಟಿಯಿಂದ 6 ಮಹಿಳಾ ಠಾಣೆ : ಸಿಎಂ ಬೊಮ್ಮಾಯಿ

ಆರೋಗ್ಯ ಸಚಿವರು ಹೇಳಿದ್ದೇನು?

ಸಂಭಾವನೆ ಹೆಚ್ಚಳ ಸಂಬಂಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದಾರೆ. ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES