Wednesday, January 22, 2025

ಗುಡ್ ನ್ಯೂಸ್ : ಮಹಿಳೆಯರಿಗೆ ಭರ್ಜರಿ ಆಫರ್

ಬೆಂಗಳೂರು : ರಾಜ್ಯ ಸೇರಿದಂತೆ ದೇಶಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಮಹಿಳಾ ದಿನದ ಪ್ರಯುಕ್ತ ಮಹಿಳಾ ಮಣಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ.

ಹೌದು, ಅಂತರಾಷ್ಟ್ರೀಯ ಮಹಿಳಾ ದಿನದಂದು ಅಂದರೆ ಇದೇ ಮಾರ್ಚ್ 8ರಂದು ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಬಿಎಂಟಿಸಿ (BMTC) ಮುಂದಾಗಿದೆ.

ಈ ಸಂಬಂಧ ಬಿಎಂಟಿಸಿ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಈ ನಿರ್ಧಾರದಿಂದ ರಾಜ್ಯ ಸರ್ಕಾರದ ಜನಪ್ರಿಯತೆಯೂ ಹೆಚ್ಚಾಗಲಿದೆ. ಜೊತೆಗೆ, ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲಾಗುತ್ತದೆ ಎಂದು ಬಿಎಂಟಿಸಿ ತಿಳಿಸಿದೆ.

ಇದನ್ನೂ ಓದಿ : ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ..!

ಉಚಿತವಾಗಿ ಸಂಚಾರಕ್ಕೆ ಅವಕಾಶ ಸಾಧ್ಯತೆ

ಬಿಎಂಟಿಸಿ ಎಂ.ಡಿ ಜಿ.ಸತ್ಯವತಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಅನುಮತಿ ಕೋರಿ ಪತ್ರ  ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 8 ರಂದು ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಸಾಧ್ಯತೆಯಿದೆ ಎನ್ನಲಾಗಿದೆ. ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟರೆ, ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರು ಟಿಕೆಟ್ ಇಲ್ಲದೆ ಉಚಿತವಾಗಿ ಸಂಚಾರ ಮಾಡಬಹುದು.

10 ಲಕ್ಷಕ್ಕೂ ಹೆಚ್ಚು  ಮಹಿಳಾ ಪ್ರಯಾಣಿಕರು

ನಿತ್ಯ ಬೆಂಗಳೂರಿನಲ್ಲಿ 10.21 ಲಕ್ಷ  ಮಹಿಳಾ ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಮಹಿಳಾ ದಿನಾಚರಣೆ ದಿನದಂದು ಉಚಿತ ಸೇವೆ ಕಲ್ಪಿಸಿದರೆ ಸುಮಾರು 20 ಲಕ್ಷ ಜನ ಸಂಚಾರ ಮಾಡುಬಹುದು. ಜೊತೆಗೆ, ಮಾರ್ಚ್8ರಂದು ನಿಗಮಕ್ಕೆ 8 ಕೋಟಿ ನಷ್ಟ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ.

RELATED ARTICLES

Related Articles

TRENDING ARTICLES