Sunday, December 22, 2024

ಸ್ವಾಭಿಮಾನಿ ಸುಮಲತಾ ‘ಕೈ’ಯಲ್ಲಿ ಕೇಸರಿ ಶಾಲು

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ.ಇದರ ಬೆನ್ನಲ್ಲೇ ಸುಮಲತಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡೆಸಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಪ್ರಹ್ಲಾದ್ ಜೋಶಿ ಜೊತೆ ವೇದಿಕೆ ಹಂಚಿಕೊಂಡ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ನಾಯಕರು ಕೇಸರಿ ಶಾಲು ನೀಡಿ ಆತ್ಮೀಯವಾಗಿ ಸಭೆಗೆ ಸ್ವಾಗತ ಕೋರಿದ್ದಾರೆ. ಆದರೆ, ಸ್ವಾಭಿಮಾನಿ ಸುಮಲತಾ ಬಿಜೆಪಿ ಶಾಲನ್ನು ಹಾಕಿಕೊಳ್ಳದೇ ಕೈಯಲ್ಲಿ ಹಿಡಿದುಕೊಂಡಿದ್ದರು. ಆ ಮೂಲಕ ಸುಮಲತಾ ಮತ್ತೊಮ್ಮೆ ತಮ್ಮ ಜಾಣ್ಮೆಯನ್ನು ಪ್ರದರ್ಶಿಸಿದ್ದಾರೆ.

ಪ್ರಧಾನಿ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ?

ಇದೇ ಮಾರ್ಚ್ 18ರಮದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಸಹ ಮೋದಿ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಅಂದೇ ಸಂಸದೆ ಸುಮಲತಾ ಪ್ರಧಾನಿ ಮೋದಿ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಫರ್ ಬಂದಿಲ್ಲ : ಸಚಿವ ಸೋಮಶೇಖರ್

ಇಂದೇ ರೆಬೆಲ್ ಲೇಡಿ ಭವಿಷ್ಯ ನಿರ್ಧಾರ?

ರಾಜ್ಯ ರಾಜಕಾರಣಕ್ಕೆ ಬರುವ ವಿಚಾರದ ಕುರಿತು ಚರ್ಚೆ ನಡೆಸಲಿರುವ ಇಂದು ಸಂಸದೆ ಸುಮಲತಾ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಬೆ ಕರೆದಿದ್ದಾರೆ. ಅಂಬರೀಶ್ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಂಡ್ಯದಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಜೆ.ಪಿ ನಗರ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕರ್ತರ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ತೀರ್ಮಾನ ಆದ ಬಳಿಕ ಇಂದೇ ಅಧಿಕೃತವಾಗಿ ಘೋಷಣೆ ಸಾಧ್ಯತೆಯಿದೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ಪಕ್ಷ ಸೇರುತ್ತಾರೋ? ಅಥವಾ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಾರೋ ಎಂಬುದು ಕುತೂಹಲ ಕೆರಳಿಸಿದೆ.

RELATED ARTICLES

Related Articles

TRENDING ARTICLES