ಬೆಂಗಳೂರು : ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದವರು ಶಿವಾಜಿ ಪ್ರತಿಮೆಯನ್ನು ಎರಡನೇ ಬಾರಿಗೆ ಉದ್ಘಾಟನೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದಿಂದ ರಾಯಗಡದಲ್ಲಿ ನಿರ್ಮಾಣಗೊಂಡಿರುವ ಶಿವಾಜಿ ಪ್ರತಿಮೆಯನ್ನು ಅಧಿಕೃತವಾಗಿ ಈಗಾಗಲೇ ಕಾರ್ಪಣೆಗೊಳಿಸಲಾಗಿದೆ.
ಅಧಿಕೃತ ಉದ್ಘಾಟನೆಯಾದ ಮೇಲೆ ಭೇಟಿ ಕೊಡಬಹುದು. ಆದರೆ ಉದ್ಘಾಟನೆಯಾದ ನಂತರ ಪುನಃ ಉದ್ಘಾಟಿಸಿಸುವುದು ಕೇಳಿಯೇ ಇಲ್ಲ. ಅಧಿಕಾರದ ಹೊರಗಿದ್ದರೂ, ಅಧಿಕಾರದ ಲಾಲಸೆ ಹಾಗೂ ಹತಾಶ ಭಾವ ಎಷ್ಟಿದೆ ಎಂದು ಸ್ಪಷ್ಟವಾಗುತ್ತದೆ. ಇದು ಬಹಳ ಹಾಸ್ಯಾಸ್ಪದ ಎಂದು ಕುಟುಕಿದ್ದಾರೆ.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೋಸ್ಟ್ ವಾಂಟೆಡ್ ಅಂದರ್
ನಿಷ್ಪಕ್ಷಪಾತವಾಗಿ ತನಿಖೆ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ರಾಜೀನಾಮೆ ಪಡೆಯುವ ಬಗ್ಗೆ ಉತ್ತರಿಸಿದ ಅವರು, ಈ ಬಗ್ಗೆ ತೀರ್ಮಾನವಾಗಿಲ್ಲ. ಲೋಕಾಯುಕ್ತಕ್ಕೆ ಸರ್ವ ಸ್ವಾತಂತ್ರ್ಯ ನೀಡಿದ್ದು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಾರೆ. ಮಾಡಲಿ ಎನ್ನುವುದಷ್ಟೇ ನಮ್ಮ ಉದ್ದೇಶ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ನೆಟ್ಟಾರು ಪ್ರಕರಣದ ಬಗ್ಗೆ ಸಿಎಂ ಮಾತು
ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಎನ್.ಐ.ಎ. ಬಂಧಿಸಿದ್ದು, ಈ ಬಗ್ಗೆ ಮುಂಚೆಯೇ ಮಾಹಿತಿ ನೀಡಲಾಗಿತ್ತು. ಇದರ ಜಾಡು ಹಿಡಿದು ಈ ಪ್ರಕರಣದ ಹಿಂದಿರುವವರನ್ನು ಬಂಧಿಸಿದ್ದಾರೆ ಎಂದರು.