Thursday, December 26, 2024

ಬಿಗ್ ಅಪ್ಡೇಟ್ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೋಸ್ಟ್ ವಾಂಟೆಡ್ ಅಂದರ್

ಬೆಂಗಳೂರು : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಶನಿವಾರ ತಡರಾತ್ರಿ ಕಾರ್ಯಾಚರಣೆ ನಡೆಸಿರುವ ಎನ್ಐಎ ಅಧಿಕಾರಿಗಳು ತೌಫಿಲ್ ಎಂಬಾತನನ್ನು ಬಂಧಿಸಿದ್ದಾರೆ. ಈತನ ಪತ್ತೆಗೆ ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನವನ್ನು ಎನಐಎ ಘೋಷಿಸಿತ್ತು.

ಪ್ಲಂಬರ್‌ಗಳ ಸೋಗಿನಲ್ಲಿ ಕಾರ್ಯಾಚರಣೆ

ಆರೋಪಿಯು ಬೆಂಗಳೂರಿನಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಹತ್ತಕ್ಕೂ ಅಧಿಕ ಅಧಿಕಾರಿಗಳನ್ನೊಳಗೊಂಡ ತಂಡ ಮೊದಲು ತೌಫಿಲ್ ಮನೆಯೊಳಗೆ ಇರುವುದನ್ನು ಖಚಿತಪಡಿಸಿಕೊಂಡಿದೆ. ಬಳಿಕ ಇಬ್ಬರು ಅಧಿಕಾರಿಗಳು ಪ್ಲಂಬರ್‌ಗಳ ಸೋಗಿನಲ್ಲಿ ಮನೆಗೆ ಪ್ರವೇಶಿಸಿದ್ದಾರೆ.

ಮಟನ್ ಕತ್ತರಿಸುತ್ತಿದ್ದ ಆರೋಪಿ

ಈ ವೇಳೆ ಮನೆಯಲ್ಲಿ ಮಟನ್ ಕತ್ತರಿಸುತ್ತಿದ್ದ ಆರೋಪಿ ಎನ್‌ಐಎ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಷ್ಟರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಅಮೃತಹಳ್ಳಿಯ ಮಾರುತಿ ಲೇಔಟ್‌ನ ದಾಸರಹಳ್ಳಿಯಲ್ಲಿರುವ ನಂಜುಂಡಪ್ಪ ಎಂಬುವರ ಮನೆಯಲ್ಲಿ ಸುಮಾರು ಐದಾರು ತಿಂಗಳಿಂದ ಬಾಡಿಗೆಗೆ ವಾಸವಿದ್ದ ತೌಫಿಲ್, ಯಾರ ಜೊತೆಗೂ ಸೇರದೆ ಒಬ್ಬನೇ ಇರುತ್ತಿದ್ದ. ಮೂರು ಅಂತಸ್ತಿನ ಕಟ್ಟಡದಲ್ಲಿ ಮೊದಲನೇ ಮಹಡಿಯಲ್ಲಿ ವಾಸವಿದ್ದನು ಎಂದು ತಿಳಿದುಬಂದಿದೆ.

 

RELATED ARTICLES

Related Articles

TRENDING ARTICLES